Wednesday, March 12, 2008

ನಾನು ಗುಣಮುಖ

ಅಧಿಕೃತವಾಗಿ ಇಂದು ನಾನು ಕ್ರಾನಿಕ್ ಅರ್ಟಿಕೇರಿಯಾದಿಂದ ಗುಣಮುಖನಾಗಿದ್ದೇನೆ. ವೈದ್ಯೋ ನಾರಾಯಣೋ ಹರಿಃ.

-ಅ
12.03.2008
11.40PM

4 comments:

  1. [ಅನ್ನಪೂರ್ಣ] ಇಷ್ಟು ದಿನ ನನ್ನನ್ನು ಕಾಡಿಸಿದ್ದ ಒಂದು ಸುಂದರ ಕಾಯಿಲೆ. ಸುಮಾರು ಐದು ತಿಂಗಳು! ಅದರ ಬಗ್ಗೆ ಮಾಹಿತಿ ಬೇಕು ಅಂದರೆ ಈ ಕೊಂಡಿಯನ್ನು ನೋಡಿ.

    http://www.urticaria.com/app/urticaria.asp

    ReplyDelete
  2. ನಮಸ್ಕಾರ ಅರುಣ್ ಅವರೇ ,
    ಕಾಫಿ ಆಯ್ತಾ?

    ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

    ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ ‘ಪ್ರಣತಿ’, ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

    ಡೇಟು: 16 ಮಾರ್ಚ್ 2008
    ಟೈಮು: ಇಳಿಸಂಜೆ ನಾಲ್ಕು
    ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಸವನಗುಡಿ, ಬೆಂಗಳೂರು

    ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, ‘ದಟ್ಸ್ ಕನ್ನಡ’ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, ‘ಸಂಪದ’ದ ಹರಿಪ್ರಸಾದ್ ನಾಡಿಗ್, ‘ಕೆಂಡಸಂಪಿಗೆ’ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

    ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, ‘ಪ್ರಣತಿ’ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

    ಅಲ್ಲಿ ಸಿಗೋಣ,
    ಇಂತಿ,
    -ಶ್ರೀಧರ

    ReplyDelete